ಹೇಗ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಹಾಗೂ ಹಮಾಸ್ ಮುಖ್ಯಸ್ಥ ಮೊಹಮ್ಮದ್ ಡೀಫ್ ವಿರುದ್ಧ ಅಂತರರಾಷ್ಟ್ರೀಯ ಅಪರಾಧ ನ್ಯಾಯಾಲಯ (ಐಸಿಸಿ) ಗುರುವಾರ ಬಂಧನದ ವಾರಂಟ್ ಜಾರಿಗೊಳಿಸಿದೆ.
ಐಸಿಸಿಯ ಈ ಕ್ರಮವು ನೆತನ್ಯಾಹು ಅವರ ಸಂಚಾರಕ್ಕೆ ನಿರ್ಬಂಧ ವಿಧಿಸುತ್ತದೆ. ನ್ಯಾಯಾಲಯದ 124 ಸದಸ್ಯ ರಾಷ್ಟ್ರಗಳು ತಮ್ಮ ವ್ಯಾಪ್ತಿಯಲ್ಲಿ ಅವರನ್ನು ಬಂಧಿಸಬಹುದಾಗಿದೆ.
ಮಾನವೀಯತೆಯ ವಿರುದ್ಧದ ಅಪರಾಧ ಮತ್ತು 2023ರ ಅಕ್ಟೋಬರ್ 8ರಿಂದ ಅವರು ನಡೆಸಿರುವ ಯುದ್ಧಾಪರಾಧಗಳಿಗಾಗಿ ನೆತನ್ಯಾಹು ಮತ್ತು ಗ್ಯಾಲಂಟ್ ಅವರನ್ನು ಬಂಧಿಸಲು ವಾರಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ. ಡೀಫ್ ವಿರುದ್ಧವೂ ಐಸಿಸಿ ವಾರಂಟ್ ಜಾರಿ ಮಾಡಿದೆ.
ದಕ್ಷಿಣ ಗಾಜಾದಲ್ಲಿ ಜುಲೈನಲ್ಲಿ ತಾನು ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಆಗಸ್ಟ್‌ನಲ್ಲಿ ಹೇಳಿತ್ತು. ಆದರೆ ಹಮಾಸ್ ಅದನ್ನು ನಿರಾಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.