ಜೆರುಸಲೇಂ: ಇಸ್ರೇಲ್ ಮತ್ತು ಇರಾನ್ ನಡುವಣ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎರಡೂ ದೇಶಗಳ ನಾಯಕರು ಪರಸ್ಪರರ ಮೇಲೆ ದಾಳಿ ನಡೆಸುವ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಇರಾನ್ ಮಂಗಳವಾರ ರಾತ್ರಿ ನಡೆಸಿದ ದಾಳಿಗೆ ಪ್ರತಿದಾಳಿ ನಡೆಸುವುದಾಗಿ ಇಸ್ರೇಲ್ ಹೇಳಿದೆ. ಪ್ರತಿದಾಳಿ ನಡೆಸಿದ್ದೇ ಆದಲ್ಲಿ ಭಾರಿ ಪ್ರಮಾಣದಲ್ಲಿ ಮತ್ತೆ ದಾಳಿ ನಡೆಸಲಾಗುವುದು ಎಂದು ಇರಾನ್ ಎಚ್ಚರಿಕೆ ನಿಡಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದ ನಂತರ ಕಚ್ಚಾ ತೈಲದ ಬೆಲೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರಲ್‌ಗೆ 75 ಡಾಲರ್ ದಾಟಿದೆ.
ಎರಡೂ ದೇಶಗಳ ನಡುವಣ ಸಂಘರ್ಷವು ಈ ಹಂತದಿಂದ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ತಜ್ಞರು ಭೀತಿ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿಶ್ಲೇಷಕ ಜೋರ್ಡನ್ ಬರ್ಕಿನ್ ಅವರು, ‘ಇದು ಒಳ್ಳೆಯ ರೀತಿಯಲ್ಲಿ ಕೊನೆಗೊಳ್ಳುವುದಿಲ್ಲ. ಪ್ರಚೋದನೆಗೆ ಒಳಗಾದಾಗ ತ್ವರಿತವಾಗಿ ಹಾಗೂ ಬಲವಾಗಿ ಪ್ರತಿಕ್ರಿಯೆ ನೀಡುವುದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊದಲಿನಿಂದಲೂ ಪಾಲಿಸಿಕೊಂಡು ಬಂದಿದ್ದಾರೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.