ಇಸ್ಲಾಮಾಬಾದ್: ಅಫ್ಗಾನಿಸ್ತಾನ ರಾಜಧಾನಿಯಲ್ಲಿ ಶನಿವಾರ ಮಿನಿ ಬಸ್ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಇಸ್ಲಾಮಿಕ್ ಸ್ಟೇಟ್ ಗ್ರೂಪ್ ದಾಳಿಯ ಹೊಣೆಯನ್ನು ಹೊತ್ತಿದೆ.
ದಸ್ತಿ ಬರ್ಚಿಯಲ್ಲಿ ನಡೆದ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
‘ಶಿಯಾ ಮುಸ್ಲಿಮರಿದ್ದ ಬಸ್ನಲ್ಲಿ ಸ್ಫೋಟಕ ಸಾಧನಗಳನ್ನು ಇಟ್ಟು ದಾಳಿ ನಡೆಸಲಾಯಿತು’ ಎಂದು ಸುನ್ನಿ ಭಯೋತ್ಪಾದಕ ಗುಂಪು ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.