ಗಜಾ ಪಟ್ಟಿ: ಬೈತ್ ಲಹಿಯಾದಲ್ಲಿರುವ ಇಂಡೊನೇಷ್ಯಾ ಆಸ್ಪತ್ರೆಯನ್ನು ಸುತ್ತುವರಿದು ಇಸ್ರೇಲ್ ಪಡೆಗಳು ದಾಳಿ ನಡೆಸಿವೆ ಎಂದು ಗಾಜಾದ ವೈದ್ಯಕೀಯ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ಇಸ್ರೇಲ್ ಟ್ಯಾಂಕ್‌ಗಳು ಆಸ್ಪತ್ರೆಯನ್ನು ಸುತ್ತುವರಿದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಎರಡು ಹಾಗೂ ಮೂರನೇ ಮಹಡಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಸುಲ್ತಾನ್ ಹೇಳಿದ್ದಾರೆ.
ಇಸ್ರೇಲ್ ದಾಳಿಯಿಂದಾಗಿ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳು ಭಾರಿ ಅಪಾಯದಲ್ಲಿದ್ದಾರೆ’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ದಾಳಿಯಿಂದಾಗಿ 40 ರೋಗಿಗಳು ಗಾಯಗೊಂಡಿದ್ದಾರೆ. ವೈದ್ಯಕೀಯ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಗಾಜಾದ ವೈದ್ಯಕೀಯ ಇಲಾಖೆ ತಿಳಿಸಿದೆ.
ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ಭಾರಿ ಗುಂಡಿನ ದಾಳಿ ನಡೆಯಿತು. ಅಲ್ಲಿ ಭಾರಿ ಭಯದ ವಾತಾವರಣ ನಿರ್ಮಾಣವಾಯಿತು ಎಂದು ಪ್ರಕಟಣೆಯಲ್ಲಿ ಹೇಳಿದೆ.
ಕದನ ವಿರಾಮದ ಒತ್ತಡದ ಹೊರತಾಗಿಯೂ ಉತ್ತರ ಗಾಜಾದಲ್ಲಿ ಇಸ್ರೇಲ್ ಆಕ್ರಮಣ ಮುಂದುವರಿದಿದೆ. ಆದರೆ ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದೇವೆ ಎಂದು ಇಸ್ರೇಲ್ ಹೇಳಿದೆ.
ಜಬಾಲಿಯಾದಲ್ಲಿ ಶುಕ್ರವಾರ ರಾತ್ರಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದಾರೆ.
(ಏಜೆನ್ಸಿಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.