ದೀರ್ ಅಲ್–ಬಲಾಹ್: ಕೈರೋದಲ್ಲಿ ಕದನವಿರಾಮ ಕುರಿತಾದ ಮಾತುಕತೆಗಳು ಪ್ರಗತಿಯಲ್ಲಿರುವಾಗಲೇ, ಕೇಂದ್ರ ಗಾಜಾದಲ್ಲಿ ನಿರಾಶ್ರಿತರ ಕೇಂದ್ರಗಳ ಮೇಲೆ ಶನಿವಾರ ರಾತ್ರಿ ಇಸ್ರೇಲ್ ಪಡೆಗಳು ದಾಳಿ ನಡೆಸಿದ್ದು, 13 ಜನ ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ.
‘ನುಸೈರತ್ ಮತ್ತು ಬುರೈಜಿಯಲ್ಲಿರುವ ನಿರಾಶ್ರಿತರ ಕೇಂದ್ರಗಳ ಮೇಲೆ ದಾಳಿ ನಡೆದಿದ್ದು, ಮೃತಪಟ್ಟ ಮಕ್ಕಳು–ಮಹಿಳೆಯರು ಸೇರಿದಂತೆ 13 ಜನರ ದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ’ ಎಂದು ಪಾಲೆಸ್ಟೀನ್‌ನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
‘ಗುರುವಾರ ಸಂಜೆ ನುಸೈರತ್‌ನಲ್ಲಿ ನಡೆದ ದಾಳಿಯೊಂದರಲ್ಲಿ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದರು. ಆದರೆ ಆವರ ಹೊಟ್ಟೆಯಲ್ಲಿದ್ದ ಮಗುವನ್ನು ರಕ್ಷಿಸಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.