ಬೈರೂತ್: ದಕ್ಷಿಣ ಲೆಬನಾನ್ ಮೇಲೆ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ 15 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.
ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ತಿಳಿಸಿದೆ.
ಬೈರೂತ್ ಮೇಲೆ ಇಸ್ರೇಲ್ ಬಾಂಬ್ ದಾಳಿ...
ಮತ್ತೊಂದೆಡೆ ಲೆಬನಾನ್ ರಾಜಧಾನಿ ಹಾಗೂ ಅತಿ ದೊಡ್ಡ ನಗರ ಬೈರೂತ್ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಹಲವು ಕಟ್ಟಡಗಳು ನೆಲಸಮಗೊಂಡಿವೆ.
ಲೆಬನಾನಿನ ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಹಮಾಸ್ ಮತ್ತು ಹಿಜ್ಬುಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರಿಸಿದೆ.
ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಆದರೆ ಇಸ್ರೇಲ್ ದಾಳಿ ನಡೆಸಿದರೆ ಇದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಪ್ರತಿದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.