ADVERTISEMENT

ವಿಶ್ವಾಸದ ಕೊರತೆ: ರಕ್ಷಣಾ ಸಚಿವರನ್ನು ವಜಾಗೊಳಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ರಾಯಿಟರ್ಸ್
Published 6 ನವೆಂಬರ್ 2024, 4:37 IST
Last Updated 6 ನವೆಂಬರ್ 2024, 4:37 IST
<div class="paragraphs"><p>ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು</p></div>

ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು

   

–ರಾಯಿಟರ್ಸ್ ಚಿತ್ರ

ಜೆರುಸಲೇಂ: ಇಸ್ರೇಲ್‌ನಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ನಿರ್ವಹಣೆಯ ಬಗ್ಗೆ ವಿಶ್ವಾಸದ ಕೊರತೆ ಉಲ್ಲೇಖಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸಂಪುಟದ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರನ್ನು ವಜಾಗೊಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಇಸ್ರೇಲ್‌ ವಿದೇಶಾಂಗ ಸಚಿವ ಇಸ್ರೇಲ್‌ ಕಾಟ್ಜ್‌ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇತ್ತ ಗಿಡಿಯಾನ್ ಸಾರ್ ಅವರಿಗೆ ವಿದೇಶಾಂಗ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ ಎಂದು ಪ್ರಧಾನಿಮಂತ್ರಿಯವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇಸ್ರೇಲ್‌ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಗಾಜಾ ಪಟ್ಟಿಯಲ್ಲಿ 30 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ಟೀನ್‌ನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ರೇಲ್‌ ಮತ್ತು ಹಿಜ್ಬುಲ್ಲಾ ನಡುವಣ ಸಂಘರ್ಷವು ಕಳೆದ ವರ್ಷ ಆರಂಭವಾಗಿದ್ದು ಲೆಬನಾನ್‌ನಲ್ಲಿ ಕನಿಷ್ಠ 2,900 ಮಂದಿ ಮೃತಪಟ್ಟಿದ್ದಾರೆ. 13,150 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ. ಇದರಲ್ಲಿ ಶುಕ್ರವಾರ ಉಂಟಾದ ಸಾವು–ನೋವಿನ ಸಂಖ್ಯೆ ಸೇರ್ಪಡೆ ಆಗಿಲ್ಲ. ಮೃತರಲ್ಲಿ ಕಾಲುಭಾಗದಷ್ಟು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ.

ಹಮಾಸ್‌ ವಿರುದ್ಧ ಗಾಜಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಯುದ್ಧದಲ್ಲಿ ಈವರೆಗೆ 43 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಾಗರಿಕರ ಮೇಲೆಯೂ ದಾಳಿ ನಡೆಯುತ್ತಿದೆ. ಮಹಿಳೆಯರು ಮತ್ತು ಮಕ್ಕಳೇ ಮೃತರಲ್ಲಿ ಅರ್ಧಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.