ADVERTISEMENT

ಲಂಡನ್‌: ಸ್ವಾಮಿನಾರಾಯಣ ದೇವಸ್ಥಾನಕ್ಕೆ ಜೈಶಂಕರ್ ಭೇಟಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2023, 12:47 IST
Last Updated 13 ನವೆಂಬರ್ 2023, 12:47 IST
<div class="paragraphs"><p>ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗಾಗಿ ದೀಪಾವಳಿ ದಿನವಾದ ಭಾನುವಾರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಚಹಾಕೂಟ ಏರ್ಪಡಿಸಿದ್ದರು. ಈ ವೇಳೆ ಜೈಶಂಕರ್ ಪತ್ನಿ ಕ್ಯೊಕೊ ಜೈಶಂಕರ್ ಮತ್ತು ಸುನಕ್ ಪತ್ನಿ ಅಕ್ಷತಾ ಮೂರ್ತಿ ಇದ್ದರು&nbsp; </p></div>

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗಾಗಿ ದೀಪಾವಳಿ ದಿನವಾದ ಭಾನುವಾರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಚಹಾಕೂಟ ಏರ್ಪಡಿಸಿದ್ದರು. ಈ ವೇಳೆ ಜೈಶಂಕರ್ ಪತ್ನಿ ಕ್ಯೊಕೊ ಜೈಶಂಕರ್ ಮತ್ತು ಸುನಕ್ ಪತ್ನಿ ಅಕ್ಷತಾ ಮೂರ್ತಿ ಇದ್ದರು 

   

–ಪಿಟಿಐ ಚಿತ್ರ

ಲಂಡನ್: ಬ್ರಿಟನ್‌ಗೆ ಐದು ದಿನಗಳ ಪ್ರವಾಸ ಕೈಗೊಂಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೀಪಾವಳಿ ಪ್ರಯುಕ್ತ ಇಲ್ಲಿನ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿ ನೀಡಿ, ವಿಶ್ವದಲ್ಲಿರುವ ಭಾರತೀಯ ಸಮುದಾಯದವರ ಸುಖ, ಶಾಂತಿ, ಸೌಹಾರ್ದ ಮತ್ತು ಅಭಿವೃದ್ಧಿಯಾಗಲಿ ಎಂದು ಪ್ರಾರ್ಥಿಸಿದರು. 

ADVERTISEMENT

ಈ ಸಂಬಂಧ ‘ಎಕ್ಸ್’ ವೇದಿಕೆಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಜೈಶಂಕರ್ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದರು. 

ಡೌನಿಂಗ್ ಸ್ಟ್ರೀಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಏರ್ಪಡಿಸಿದ ದೀಪಾವಳಿ ಚಹಾ ಕೂಟದಲ್ಲಿ ಎಸ್. ಜೈಶಂಕರ್ ದಂಪತಿ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.