ಟೋಕಿಯೊ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರು ಪ್ರಚಾರ ಭಾಷಣದ ವೇಳೆ ಗುಂಡೇಟಿಗೆ ಬಲಿಯಾಗಲು ಕಾರಣವಾಗಿರುವ ಭದ್ರತಾ ಲೋಪದ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಪೊಲೀಸ್ ಮುಖ್ಯಸ್ಥ ಇತಾರು ನಕಮುರಾ ಗುರುವಾರ ಹೇಳಿದ್ದಾರೆ.
ಶಿಂಜೊ ಅವರಿಗೆ ನೀಡಿದ್ದ ಭದ್ರತೆಯಲ್ಲಿನ ನ್ಯೂನತೆಗಳನ್ನು ಉಲ್ಲೇಖಿಸಿ ಪೊಲೀಸ್ ಇಲಾಖೆಯು ವರದಿ ಬಿಡುಗಡೆ ಮಾಡಿದ ಬಳಿಕ ಇತಾರು ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ.
‘ಮಾಜಿ ಪ್ರಧಾನಿ ಅವರ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರಾಜೀನಾಮೆ ಸಲ್ಲಿಸಿದ್ದೇನೆ. ಗಣ್ಯರಿಗೆ ನೀಡುವ ಭದ್ರತಾ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕು ಮತ್ತು ಇಂತಹ ಘಟನೆಗಳು ಮರುಕಳಿಸಬಾರದು’ ಎಂದು ಅವರು ತಿಳಿಸಿದ್ದಾರೆ.
ಶುಕ್ರವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಇತಾರು ಅವರ ರಾಜೀನಾಮೆ ಅಂಗೀಕಾರಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.