ಟೋಕಿಯೊ: ಜಪಾನ್‌ನ ಆಡಳಿತಾರೂಢ ಪಕ್ಷವು ಸೆ. 27ರಂದು ತನ್ನ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ಮಂಗಳವಾರ ಪ್ರಕಟಿಸಿದೆ. ಇದು ಹಾಲಿ ಪ್ರಧಾನಿ ಫ್ಯುಮಿಯೊ ಕಿಶಿಡಾ ಅವರ ಮೂರು ವರ್ಷಗಳ ಅಧಿಕಾರದ ಅವಧಿ ಅಂತ್ಯವಾಗಲಿದೆ ಎನ್ನುವುದನ್ನು ಸೂಚಿಸುತ್ತಿದೆ.
ಮುಂದಿನ ತಿಂಗಳ ಕೊನೆಯೊಳಗೆ ಪಕ್ಷದ ಆಂತರಿಕ ಚುನಾವಣೆ ನಡೆಯಬೇಕಿದೆ. ಅದರಲ್ಲಿ ಚುನಾಯಿತರಾಗುವವರ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥರಾಗುತ್ತಾರೆ. ಜೊತೆಗೆ ದೇಶದ ಪ್ರಧಾನಿಯಾಗಿಯೂ ಆಯ್ಕೆಯಾಗುತ್ತಾರೆ.
2021ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಫ್ಯುಮಿಯೊ ಕಿಶಿಡಾ ಅಧಿಕಾರದಿಂದ ಕೆಳಗಿಳಿಯುವುದಾಗಿ ಕಳೆದ ವಾರ ಅಚ್ಚರಿಯ ಘೋಷಣೆ ಮಾಡಿದ್ದರು. ಇದರ ಬೆನ್ನಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದವು.
ಸಂಸದ, ಆರ್ಥಿಕ ಭದ್ರತಾ ಮಾಜಿ ಸಚಿವ ತಕಾಯುಕಿ ಕೊಬಯಾಶಿ ಮೊದಲಿಗರಾಗಿ ತಮ್ಮ ಉಮೇದುವಾರಿಕೆಯನ್ನು ಸೋಮವಾರ ಘೋಷಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.