ಟೋಕಿಯೊ: ಸುನಾಮಿಯಿಂದ ಹಾನಿಗೊಳಗಾಗಿದ್ದ ಫುಕುಶಿಮಾ ಪರಮಾಣು ಸ್ಥಾವರಕ್ಕೆ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಭಾನುವಾರ ಭೇಟಿ ನೀಡಿ, ಪೆಸಿಫಿಕ್ ಮಹಾಸಾಗರಕ್ಕೆ ಸಂಸ್ಕರಿಸಿದ ವಿಕಿರಣಶೀಲ ತ್ಯಾಜ್ಯನೀರಿನ ಬಿಡುಗಡೆಯನ್ನು ಮುಂದೂಡಲಾಗುವುದಿಲ್ಲ ಎಂದು ಹೇಳಿದರು.
ಈ ಯೋಜನೆಯು ಸುರಕ್ಷಿತವಾಗಿದೆ. ಮೀನುಗಾರರ ಬೆಂಬಲಕ್ಕೆ ಸರ್ಕಾರ ಸದಾ ಸಿದ್ಧವಾಗಿದೆ ಎಂದು ಭರವಸೆ ನೀಡಿದ ಅವರು, ದಶಕಗಳಿಂದಲೂ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಎಂದೂ ಕಿವಿಮಾತು ಹೇಳಿದರು.
ಕಿಶಿಡಾ ಅವರು ಸ್ಥಾವರ ಮತ್ತು ಕಂಪನಿಯ ಕಾರ್ಯನಿರ್ವಾಹಕರನ್ನು ಭೇಟಿ ಮಾಡಿ, ನೀರಿನ ಹರಿವು ಮತ್ತು ಸುರಕ್ಷೆ ಕುರಿತು ಮಾಹಿತಿ ಪಡೆದರು.
ಮುಂದಿನ ವಾರ ನಡೆಯುವ ಸಭೆಯಲ್ಲಿ ಸಚಿವರು ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳನ್ನು ಭೇಟಿ ಮಾಡುವ ಭರವಸೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.