ಡೆನ್ವೆರ್, ಅಮೆರಿಕ(ಎಪಿ): ಎರಡು ವರ್ಷಗಳ ಹಿಂದೆ ಜಾರ್ಜ್ ಫ್ಲಾಯ್ಡ್ ಅವರ ಹತ್ಯೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಅತಿಯಾದ ಬಲ ಪ್ರಯೋಗ ಮಾಡುವ ಮೂಲಕ ಅವರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಇಲ್ಲಿನ ನ್ಯಾಯಾಲಯ ಮನಗಂಡಿದೆ.
ಈ ಸಂಬಂಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ 12 ಮಂದಿಗೆ ₹106 ಕೋಟಿ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.
ಇಬ್ಬರು ಪುರುಷರು ಮತ್ತು 6 ಮಹಿಳಾ ನ್ಯಾಯಾಧೀಶರನ್ನು ಹೊಂದಿದ್ದ ನ್ಯಾಯಪೀಠವುಈ ಬಗ್ಗೆ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿ, ಈ ತೀರ್ಪು ನೀಡಿದೆ. ಪೊಲೀಸರು ಮತ್ತು ಪ್ರತಿಭಟನಕಾರರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ನ್ಯಾಯಾಲಯ ಈ ಆದೇಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.