ಇಸ್ಲಾಮಾಬಾದ್:ಭಾರತೀಯ ಯಾತ್ರಾರ್ಥಿಗಳು ಪಾಸ್‌ಪೋರ್ಟ್ ಇಲ್ಲದೇ ಕರ್ತಾರ್‌ಪುರ ಕಾರಿಡಾರ್ ಪ್ರವೇಶಿಸಲು ಅವಕಾಶ ಕಲ್ಪಿ
ಸುವಪ್ರಸ್ತಾವವನ್ನು ಪರಿಶೀಲಿಸಲಾಗುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಜಾಜ್ ಶಾ ತಿಳಿಸಿದ್ದಾರೆ.
ಗುರುದ್ವಾರ ದರ್ಬಾರ್ ಸಾಹಿಬ್‌ಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲು ಚಿಂತಿಸಲಾಗಿದೆ ಎಂದು ಸಂಸತ್ ಅಧಿವೇಶನದಲ್ಲಿ ಅವರು ಹೇಳಿದ್ದಾರೆ.
ಪಂಜಾಬ್‌ನ ಡೇರಾ ಬಾಬಾ ನಾನಕ್ ಸ್ಮಾರಕ ಮತ್ತು ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್ ಸಾಹಿಬ್ ನಡುವೆ ಸಂಪರ್ಕ ಕಲ್ಪಿಸುವ ಕರ್ತಾರ್‌ಪುರ ಕಾರಿಡಾರ್ ನವೆಂಬರ್‌ನಲ್ಲಿ ಉದ್ಘಾಟನೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.