ಇಸ್ಲಾಮಾಬಾದ್: ಪ್ರವಾಹ ಪೀಡಿತ ಕೇರಳಕ್ಕೆ ಮಾನವೀಯ ನೆಲೆಯಲ್ಲಿ ನೆರವು ನೀಡಲು ಸಿದ್ಧವಿರುವುದಾಗಿಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಪಾಕಿಸ್ತಾನದ ಜನರ ಪರವಾಗಿ, ಭಾರತದ ಕೇರಳದಲ್ಲಿನ ಪ್ರವಾಹ ಸಂತ್ರಸ್ತರಿಗಾಗಿ ಪ್ರಾರ್ಥಿಸುತ್ತೇವೆ. ಅಗತ್ಯವಿರುವ ಯಾವುದೇ ಮಾನವೀಯ ನೆರವು ಒದಗಿಸಲು ನಾವು ಸಿದ್ಧರಿದ್ದೇವೆ’ ಎಂದು ತಿಳಿಸಿದ್ದಾರೆ.
ಕೇರಳ ಪ್ರವಾಹ ಪರಿಹಾರದ ಭಾಗವಾಗಿ ಯುಎಇ ಸೇರಿದಂತೆ ಹಲವು ದೇಶಗಳು ಘೋಷಿಸಿದ್ದ ದೇಣಿಗೆಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿರಾಕರಿಸಿದೆ.
‘ಪ್ರವಾಹದಿಂದಾಗಿ ಕೇರಳದಲ್ಲಿ ತಲೆದೋರಿರುವ ಸಮಸ್ಯೆಗಳ ಪರಿಹಾರ ಮತ್ತು ಪುನರ್ವಸತಿ ನಿರ್ಮಾಣ ಕಾರ್ಯಗಳಲ್ಲಿ ನೆರವಾಗಲು ಹಲವು ದೇಶಗಳು ಮುಂದೆ ಬಂದಿರುವುದನ್ನು ಭಾರತ ಶ್ಲಾಘಿಸುತ್ತದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿಕೆ ನೀಡಿದ್ದರು.
ಇನ್ನಷ್ಟು ಸುದ್ದಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.