ADVERTISEMENT

ಕುವೈತ್ ಅಗ್ನಿದುರಂತ: ಸತ್ತವರಲ್ಲಿ ಹೆಚ್ಚಿನವರು ಕೇರಳದವರು

ಪಿಟಿಐ
Published 13 ಜೂನ್ 2024, 2:44 IST
Last Updated 13 ಜೂನ್ 2024, 2:44 IST
<div class="paragraphs"><p>ಕುವೈತ್ ಅಗ್ನಿದುರಂತ</p></div>

ಕುವೈತ್ ಅಗ್ನಿದುರಂತ

   

ಪಿಟಿಐ

ನವದೆಹಲಿ: ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 42 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ವರದಿ ಮಾಡಿವೆ.

ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಕುವೈತ್‌ಗೆ ತೆರಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೀರ್ತಿವರ್ಧನ್, ‘ಘಟನೆ ಸಂಬಂಧ ಬುಧವಾರ ಸಂಜೆ ಪ್ರಧಾನಿಯವರೊಂದಿಗೆ ಸಭೆ ನಡೆಸಿದ್ದೇವೆ. ಅಲ್ಲಿಗೆ ತಲುಪಿದ ತಕ್ಷಣ ಪರಿಸ್ಥಿತಿಯ ಪೂರ್ಣ ಚಿತ್ರಣ ಸಿಗುತ್ತದೆ’ ಎಂದರು.

‘ಕೆಲವು ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿರುವುದು ತಿಳಿದುಬಂದಿದೆ. ಮೃತದೇಹಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ. ಮೃತದೇಹಗಳನ್ನು ಸಾಗಿಸಲು ವಾಯುಪಡೆಯ ವಿಮಾನಗಳು ಸಿದ್ಧವಾಗಿವೆ. ಶವಗಳನ್ನು ಗುರುತಿಸಿದ ತಕ್ಷಣ ಸಂಬಂಧಿಕರಿಗೆ ಮಾಹಿತಿ ನೀಡಲಾಗುತ್ತದೆ’ ಎಂದು ಹೇಳಿದರು.

‘ಈಗಿನ ಮಾಹಿತಿ ಪ್ರಕಾರ ದುರಂತದಲ್ಲಿ 48ರಿಂದ 49 ಮಂದಿ ಮೃತಪಟ್ಟಿದ್ದು, ಅದರಲ್ಲಿ 42ರಿಂದ 43 ಮಂದಿ ಭಾರತೀಯರು ಎಂದು ಹೇಳಲಾಗಿದೆ. ಅಲ್ಲಿಗೆ ತಲುಪಿದ ತಕ್ಷಣ ಘಟನೆಯ ಪೂರ್ಣ ಮಾಹಿತಿ ಸಿಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.