ADVERTISEMENT

ಇಂಡೋನೇಷ್ಯಾದಲ್ಲಿ ಪ್ರವಾಹ: 16 ಮಂದಿ ಸಾವು, ಹಲವರು ನಾಪತ್ತೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2024, 12:48 IST
Last Updated 25 ನವೆಂಬರ್ 2024, 12:48 IST
<div class="paragraphs"><p>ಇಂಡೋನೇಷ್ಯಾದ ಕರೊ ಜಿಲ್ಲಯ ಸೆಮಂಗತ್‌ ಗುನುಂಗ್‌ ಗ್ರಾಮದ ಕುಟುಂಬವೊಂದರ ಜನರು ಪ್ರವಾಹ ಪೀಡಿತ ಸ್ಥಳದಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಂಡರು</p></div>

ಇಂಡೋನೇಷ್ಯಾದ ಕರೊ ಜಿಲ್ಲಯ ಸೆಮಂಗತ್‌ ಗುನುಂಗ್‌ ಗ್ರಾಮದ ಕುಟುಂಬವೊಂದರ ಜನರು ಪ್ರವಾಹ ಪೀಡಿತ ಸ್ಥಳದಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಂಡರು

   

ಕರೊ (ಇಂಡೋನೇಷ್ಯಾ): ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ವಾರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 16 ಮಂದಿ ಮೃತಪ‍ಟ್ಟಿದ್ದಾರೆ. 

ಉತ್ತರ ಸುಮತ್ರಾ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಪ್ರಮಾಣವು ತೀವ್ರ ಹೆಚ್ಚಾಗಿದ್ದರಿಂದ ಸುಮತ್ರಾದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದಾಗಿ ಹಲವು ಮನೆಗಳು ಕೊಚ್ಚಿ ಹೋಗಿದ್ದು, ಒಟ್ಟು 321 ಎಕರೆ ಕೃಷಿ ಭೂಮಿ ನಾಶವಾಗಿದೆ. 

ADVERTISEMENT

ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಇದುವರೆಗೆ 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾಗಿರುವ 6 ಜನರಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.