ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ ಇರುವ ನ್ಯೂ ಸೌತ್ ವೇಲ್ಸ್ ರಾಜಧಾನಿಯಾಗಿರುವ ಸಿಡ್ನಿ ನಗರದಲ್ಲಿ ಈ ಹಡಗು ಲಂಗರು ಹಾಕಿದ್ದು, ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದು ಆಸ್ಟ್ರೇಲಿಯಾದ ಗೃಹ ಮಂತ್ರಾಲಯ ನಾಗರಿಕರಿಗೆ ಸೂಚನೆ ನೀಡಿದೆ.
ಹಡಗಿನಲ್ಲಿ ನೂರಾರು ಜನರಿಗೆ ಕೋವಿಡ್ ಪತ್ತೆಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ಹೀಗೆ ಈ ಪ್ರಕರಣವನ್ನು ಆಸ್ಟ್ರೇಲಿಯಾ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಕ್ಲಾರ್ ಓ‘ನೀಲ್, ‘ಸ್ಥಳದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ. ಮೆಜೆಸ್ಟಿಕ್ ಪ್ರಿನ್ಸನ್‌ನಿಂದ ಪ್ರಯಾಣಿಕರನ್ನು ಹೊರ ತರುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ‘ ಎಂಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.