ಮಾಲೆ: ಮಾಲ್ದೀವ್ಸ್ನ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಬುಧವಾರದಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ
ಎಸ್. ಜೈಶಂಕರ್ ಅವರನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಲಿದ್ದಾರೆ.
ಮಾಲ್ದೀವ್ಸ್ ಮತ್ತು ಭಾರತದ ನಡುವಿನ ದೀರ್ಘಾಕಾಲದ ಪಾಲುದಾರಿಕೆ ಬಲಗೊಳಿಸುವ ಮತ್ತು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಚೀನಾ ಪರ ಒಲವುಳ್ಳ ಅಲ್ಲಿನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಧಿಕಾರ ವಹಿಸಿಕೊಂಡು ಆರು ತಿಂಗಳಾಗಿದ್ದು, ಈ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಹಳಸಿದೆ. ಈ ಸಂದರ್ಭದಲ್ಲಿ ಮಾಲ್ದೀವ್ಸ್ನ ಉನ್ನತ ಮಟ್ಟದ ಅಧಿಕಾರಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ವಿದೇಶಾಂಗ ಸಚಿವ ಜಮೀರ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಭಾರತಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.