ಬಮಾಕೊ (ಮಾಲಿ): ಮಧ್ಯ ಮಾಲಿಯ ಮಾಪ್ಟಿ ಪ್ರದೇಶದ ಹಳ್ಳಿಯ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿ ಕನಿಷ್ಠ 21 ನಾಗರಿಕರನ್ನು ಹತ್ಯೆಗೈದಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಅಪರಿಚಿತ ಗುಂಪೊಂದು ಏಕಾಏಕಿ ಹಳ್ಳಿಗೆ ನುಗ್ಗಿ ದಾಳಿ ನಡೆಸಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಈವರೆಗೆ ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ ಎಂದು ವರದಿ ತಿಳಿಸಿದೆ.
ಪಶ್ಚಿಮ ಆಫ್ರಿಕಾದ ರಾಷ್ಟ್ರವು ಅಲ್ ಖೈದಾ ಮತ್ತು ಇಸ್ಲಾಮಿಕ್ ಸ್ಟೇಟ್‌ನ ಸಂಪರ್ಕದಿಂದಾಗಿ ಹಿಂಸಾತ್ಮಕ ದಂಗೆಯನ್ನು ಎದುರಿಸುತ್ತಿದೆ, ಅದರಲ್ಲೂ 2012 ರಲ್ಲಿ ಟುವಾರೆಗ್ ಪ್ರದೇಶದಲ್ಲಿ ಪ್ರತ್ಯೇಕತಾವಾದಿ ಗುಂಪು ನಡೆಸಿದ ದಂಗೆಯ ನಂತರ ದಾಳಿಗಳ ಪ್ರಮಾಣವೂ ಹೆಚ್ಚಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.