ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.
ಖುರ್ರಂ ಜಿಲ್ಲೆಯ ಸದ್ದಾ ಬಜಾರ್‌ನಲ್ಲಿ ದುಷ್ಕರ್ಮಿಗಳು ಸ್ವಯಂಚಾಲಿತ ಬಂದೂಕುಗಳಿಂದ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ದುಷ್ಕರ್ಮಿಗಳ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ. ಯಾವುದೇ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದಿದ್ದಾರೆ. ಈ ಪ್ರದೇಶದಲ್ಲಿ ಸುನ್ನಿ ಮತ್ತು ಶಿಯಾ ಗುಂಪುಗಳ ನಡುವೆ ಪದೇಪದೇ ಘರ್ಷಣೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.