ಕರಾಚಿ: ಪಾಕಿಸ್ತಾನದ ಕರಾಚಿ ನಗರದ ಬಹುಮಹಡಿ ಶಾಪಿಂಗ್ ಹಾಗೂ ವಸತಿ ಮಾಲ್‌ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಯೇಶಾ ಮಂಜಿಲ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕೆಳಗಿನ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ತ್ವರಿತವಾಗಿ ಇತರೆ ಮೂರು ಮಹಡಿಗಳಿಗೂ ಆವರಿಸಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿ ಹುಮಾಯೂನ್ ಖಾನ್ ಮಾಹಿತಿ ನೀಡಿದ್ದಾರೆ.
ಕೆಳಗಿನ ಮಹಡಿಯಲ್ಲಿ 200 ಅಂಗಡಿಗಳಿವೆ. ಇದರ ಮೇಲೆ ವಸತಿ ಅಪಾರ್ಟ್‌ಮೆಂಟ್‌ಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.
ಆರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು.
ಕಳೆದ 12 ದಿನಗಳಲ್ಲಿ ಕರಾಚಿಯಲ್ಲಿ ನಡೆದ ಎರಡನೇ ಅಗ್ನಿ ಅವಘಡ ಪ್ರಕರಣ ಇದಾಗಿದೆ. ನವೆಂಬರ್ 25ರಂದು ಆರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ನಡೆದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.