ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಮಹಿಳೆಯರು, ಶಾಂತಿ ಮತ್ತು ಭದ್ರತೆ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಪಾಕಿಸ್ತಾನವು ‘ಕುಚೋದ್ಯದ ಪ್ರಚೋದನೆಯ’ ಕೆಲಸ ಮಾಡಿದೆ ಎಂದು ಭಾರತವು ತಿರುಗೇಟು ನೀಡಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಮಹಿಳೆಯರ ಸ್ಥಿತಿಯು ಶೋಚನೀಯವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಹರೀಶ್ ಪಿ. ಹೇಳಿದ್ದಾರೆ. ಪಾಕಿಸ್ತಾನದ ಪ್ರತಿನಿಧಿಗಳು ಭದ್ರತಾ ಮಂಡಳಿಯಲ್ಲಿ ಕಾಶ್ಮೀರದ ವಿಚಾರವನ್ನು ಮತ್ತೆ ಪ್ರಸ್ತಾಪಿಸಿದ್ದರು.
‘ಹಿಂದೂಗಳು, ಸಿಖ್ಖರು ಮತ್ತು ಕ್ರೈಸ್ತ ಸಮುದಾಯಕ್ಕೆ ಸೇರಿದ ಮಹಿಳೆಯರ ಸ್ಥಿತಿ ಪಾಕಿಸ್ತಾನದಲ್ಲಿ ಶೋಚನೀಯವಾಗಿದೆ ಎಂಬುದು ನಮಗೆಲ್ಲ ತಿಳಿದಿದೆ’ ಎಂದು ಹರೀಶ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.