ಕೀವ್: ಉಕ್ರೇನ್ ಮೇಲೆ ರಷ್ಯಾ ಹಾರಿಸಿದ ಕ್ಷಿಪಣಿಯೊಂದು ಪೋಲೆಂಡ್‌ನತ್ತ ಸಾಗಿ ಪತನಗೊಂಡಿದೆ. ಕ್ಷಿಪಣಿ ದಾಳಿಗೆ ಸಿಲುಕಿ ಪೋಲೆಂಡ್‌ನ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ.
ನ್ಯಾಟೋ ಪಡೆಯ ಸದಸ್ಯ ರಾಷ್ಟ್ರ ಪೋಲೆಂಡ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿದೆ.
ಕ್ಷಿಪಣಿ ದಾಳಿಗೆ ಪೋಲೆಂಡ್ ನಾಗರಿಕರು ಬಲಿಯಾದ ಬೆನ್ನಲ್ಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಉಂಟಾಗಿದೆ.
ಜೋ ಬೈಡನ್ ನೇತೃತ್ವದ ಅಮೆರಿಕ ಸರ್ಕಾರ ತುರ್ತು ಸಭೆ ನಡೆಸಿದೆ. ಜತೆಗೆ, ಪೋಲೆಂಡ್ ಕೂಡ ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.
ಉಕ್ರೇನ್‌ನ ವಿದ್ಯುತ್ ಉತ್ಪಾದನಾ ಕೇಂದ್ರಗಳನ್ನು ಗುರಿಯಾಗಿಸಿ ರಷ್ಯಾ ಮಂಗಳವಾರ 100ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆಸಿದೆ. ಅವುಗಳು ಉಕ್ರೇನ್‌ನ ಬಹುತೇಕ ವಿದ್ಯುತ್ ಮತ್ತು ಇಂಧನ ಉತ್ಪಾದನಾ ಕೇಂದ್ರಗಳನ್ನು ಧ್ವಂಸಗೊಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.