ADVERTISEMENT

ಅಮೆರಿಕ: ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಸಾವು

ಪಿಟಿಐ
Published 9 ಏಪ್ರಿಲ್ 2024, 6:14 IST
Last Updated 9 ಏಪ್ರಿಲ್ 2024, 6:14 IST
<div class="paragraphs"><p>ಸಾವು (ಸಾಂಕೇತಿಕ ಚಿತ್ರ)</p></div>

ಸಾವು (ಸಾಂಕೇತಿಕ ಚಿತ್ರ)

   

ನ್ಯೂಯಾರ್ಕ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಮೊಹಮ್ಮದ್ ಅಬ್ದುಲ್ ಅರಾಫತ್ ಅವರ ಮೃತದೇಹ ಅಮೆರಿಕದ ಕ್ಲೀವ್‌ಲ್ಯಾಂಡ್ ನಗರದಲ್ಲಿ ಪತ್ತೆಯಾಗಿದೆ.

ಇದು ಅಮೆರಿಕದಲ್ಲಿ ಒಂದು ವಾರದೊಳಗೆ ನಡೆದ ಭಾರತೀಯ ವಿದ್ಯಾರ್ಥಿಯ ಎರಡನೇ ಸಾವಿನ ಪ್ರಕರಣವಾಗಿದೆ.

ADVERTISEMENT

ಹೈದರಾಬಾದ್‌ನ ನಾಚರಾಮ್ ಮೂಲದ 25 ವರ್ಷದ ಮೊಹಮ್ಮದ್ ಅಬ್ದುಲ್ ಅರಾಫತ್ ಕಳೆದ ವರ್ಷ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಅವರು ಕ್ಲೀವ್‌ಲ್ಯಾಂಡ್ ಯುನಿವರ್ಸಿಟಿಯಲ್ಲಿ ಐಟಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದರು.

ಭಾರತೀಯ ವಿದ್ಯಾರ್ಥಿಯ ಹುಡುಕಾಟದ ವೇಳೆ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಮೃತದೇಹ ಪತ್ತೆಯಾಗಿದೆ. ಇದು ನಿಜಕ್ಕೂ ದುಃಖಕರ ವಾರ್ತೆ ಎಂದು ನ್ಯೂಯಾರ್ಕ್‌ನ ಭಾರತದ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ.

ಅರಾಫತ್ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಅವರು ಸಾವಿನ ಬಗ್ಗೆ ನಿಖರ ತನಿಖೆಗಾಗಿ ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

ಅಲ್ಲದೆ ಅಂತ್ಯಕ್ರಿಯೆಗಾಗಿ ಪಾರ್ಥಿವ ಶರೀರವನ್ನು ಭಾರತಕ್ಕೆ ರವಾನಿಸಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.