ADVERTISEMENT

ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆ ಪುನರಾರಂಭ

ಪಿಟಿಐ
Published 28 ಜುಲೈ 2024, 11:36 IST
Last Updated 28 ಜುಲೈ 2024, 11:36 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವಿರೋಧಿಸಿ ರಾಷ್ಟ್ರವ್ಯಾಪಿ ನಡೆಯುತ್ತಿದ್ದ ಹಿಂಸಾಚಾರದಿಂದಾಗಿ ಬಾಂಗ್ಲಾದೇಶದಲ್ಲಿ ನಿರ್ಬಂಧ ಹೇರಿದ್ದ ಮೊಬೈಲ್‌ ಇಂಟರ್‌ನೆಟ್‌ ಸೇವೆಯು ಭಾನುವಾರ ಪುನರಾರಂಭಗೊಂಡಿದೆ.

ಹಿಂಸಾಚಾರದ ವೇಳೆ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ದೇಶಾದ್ಯಂತ ಮೊಬೈಲ್‌ ಇಂಟರ್‌ನೆಟ್‌ ಸೇವೆ ನಿರ್ಬಂಧಿಸಿ ಜುಲೈ 18 ರಂದು ಸರ್ಕಾರ ಆದೇಶಿಸಿತ್ತು. 10 ದಿನಗಳ ಬಳಿಕ ಮೊಬೈಲ್‌ ಇಂಟರ್‌ನೆಟ್‌ ಸೇವೆ ಪುನರಾರಂಭಗೊಂಡಿದೆ.

ADVERTISEMENT

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ರಾಜ್ಯ ಸಚಿವ (ಐಸಿಟಿ) ಜುನೈದ್ ಅಹ್ಮದ್ ಪಾಲಕ್, ಇಂಟರ್‌ನೆಟ್‌ ಸಂಪರ್ಕವನ್ನು ಪುನರಾರಂಭಿಸಲಾಗಿದೆ. ಮೂರು ದಿನಗಳವರೆಗೆ ಎಲ್ಲಾ ಬಳಕೆದಾರರಿಗೆ 5 ಜಿಬಿ ಇಂಟರ್ನೆಟ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾಗಿ ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಸ್ಥಳೀಯ ಕಾಲಮಾನ ಮಧ್ಯಾಹ್ನ ಸುಮಾರು 3:00 ಗಂಟೆಗೆ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಮರು ಸ್ಥಾಪಿಸಲಾಗಿದೆ.

1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ವೀರರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 30ರಷ್ಟು ಮೀಸಲಾತಿ ನೀಡುವುದನ್ನು ವಿರೋಧಿಸಿ ದೇಶಾದ್ಯಂತ ಹಿಂಸಾಚಾರ ಉಲ್ಬಣಗೊಂಡಿತ್ತು. ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.