ನವದೆಹಲಿ: ಜಗತ್ತಿನ ದೊಡ್ಡಣ್ಣ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಅವರನ್ನು ಭಾರತದ ಪ್ರಧಾನಿ ನರೇಂದ್ರ ಅಭಿನಂದಿಸಿದ್ದಾರೆ.
ಟ್ರಂಪ್ ಗೆಲುವಿಗೆ ಅಭಿನಂದಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಸ್ನೇಹಿತ ಟ್ರಂಪ್ ಅವರಿಗೆ ಅಭಿನಂದನೆಗಳು. ನಮ್ಮ ಜನರಿಗಾಗಿ, ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಸದೃಢತೆಗಾಗಿ ಒಟ್ಟಾಗಿ ಕೆಲಸ ಮಾಡೋಣ. ಭಾರತ ಮತ್ತು ಅಮೆರಿಕ ನಡುವಿನ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ.
2016–2020ರ ಅವಧಿಯಲ್ಲಿ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದಾಗ ಅವರನ್ನು ಭೇಟಿಯಾದಾಗಿನ ಫೋಟೊವನ್ನು ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ವಿರುದ್ಧ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಶ್ವೇತಭವನ ಪ್ರವೇಶಿಸಲು ಅಣಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.