ADVERTISEMENT

ಪುಟಿನ್‌, ಝೆಲೆನ್‌ಸ್ಕಿ ಜೊತೆ ಮೋದಿ ಮಾತುಕತೆ

ಪಿಟಿಐ
Published 20 ಮಾರ್ಚ್ 2024, 19:33 IST
Last Updated 20 ಮಾರ್ಚ್ 2024, 19:33 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರ ಜತೆ ಪ್ರತ್ಯೇಕವಾಗಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಉಕ್ರೇನ್‌ ಮತ್ತು ರಷ್ಯಾ ನಡುವಿನ ಸಂಘರ್ಷಕ್ಕೆ ಚರ್ಚೆ ಮತ್ತು ರಾಜತಾಂತ್ರಿಕ ಮಾರ್ಗದ ಮೂಲಕವಷ್ಟೇ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಅವರು ಎರಡೂ ದೇಶಗಳ ನಾಯಕರಿಗೆ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷರಾಗಿ ಪುನರಾಯ್ಕೆಯಾದ ಪುಟಿನ್ ಅವರಿಗೆ ಶುಭಾಶಯ ಕೋರಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.