ನವದೆಹಲಿ: ಮಂಕಿಪಾಕ್ಸ್ ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ಘೋಷಿಸಿತು.
‘ನಿನ್ನೆ ತುರ್ತು ಸಮಿತಿ ಶಿಫಾರಸು ಮಾಡಿದೆ. ಮಂಕಿಪಾಕ್ಸ್ ಇನ್ನು ಮುಂದೆ ಅಂತರರಾಷ್ಟ್ರೀಯ ಕಾಳಜಿಯ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅದಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.
‘ಆದಾಗ್ಯೂ, ಎಲ್ಲ ಮುಗಿದಿದೆ ಎಂದು ಭಾವಿಸಬೇಕಿಲ್ಲ. ಮಂಕಿಪಾಕ್ಸ್ ಗಮನಾರ್ಹವಾದ ಸಾರ್ವಜನಿಕ ಆರೋಗ್ಯ ಸವಾಲುಗಳನ್ನು ನಮಗೆ ಒಡ್ಡುತ್ತಿದೆ’ ಎಂದು ಅವರು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.