ನವದೆಹಲಿ: ಉತ್ತರ ಆಫ್ರಿಕಾದ ಭೂಕಂಪ ಪೀಡಿತ ಮೊರಾಕ್ಕೊ ದೇಶಕ್ಕೆ ಎಲ್ಲ ರೀತಿಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಮೊರಾಕ್ಕೊದಲ್ಲಿ ಶುಕ್ರವಾರ ಸಂಭವಿಸಿದ 6.8ರ ತೀವ್ರತೆಯ ಪ್ರಬಲ ಭೂಕಂಪದಲ್ಲಿ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ಅಪಾರ ನಾಶ-ನಷ್ಟ ಸಂಭವಿಸಿದೆ.
ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಮೊರಾಕ್ಕೊ ಭೂಕಂಪದಲ್ಲಿ ಮೃತಪಟ್ಟಿವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕಷ್ಟದ ಸಮಯದಲ್ಲಿ ಜಾಗತಿಕ ಸಮುದಾಯವು ಮೊರಾಕ್ಕೊ ದೇಶದೊಂದಿಗೆ ಇದ್ದು, ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.