ಬರ್ಲಿನ್: ಶೀತ ಹವೆ ಹಾಗೂ ಹಿಮಪಾತದ ಕಾರಣ ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಿಮಾನಗಳ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
‘ಸುರಕ್ಷತೆಯ ದೃಷ್ಟಿಯಿಂದ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನಗಳು ನಿಲುಗಡೆಯಾಗುವ ಸ್ಥಳದಲ್ಲಿ ಹಿಮವನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ’ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ನೆರೆಯ ಆಸ್ಟ್ರೀಯಾ ಮತ್ತು ಸ್ವಿಟ್ಜರ್‌ಲೆಂಡ್‌ನಲ್ಲೂ ಭಾರಿ ಹಿಮಪಾತವಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.