ಬ್ಯಾಂಕಾಕ್: ಸೇನಾ ಆಡಳಿತವಿರುವ ಮ್ಯಾನ್ಮಾರ್‌ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂಕಿ ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದಐದು ಪ್ರಕರಣಗಳಲ್ಲಿ ದೋಷಿ ಎಂದು ಅಲ್ಲಿನ ನ್ಯಾಯಾಲಯವು ತೀರ್ಪು ನೀಡಿದೆ.
76 ವರ್ಷದ ಸೂಕಿ ಅವರ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು,7 ವರ್ಷಗಳ ಶಿಕ್ಷೆ ವಿಧಿಸಿದೆ.ಈ ಬಗ್ಗೆ ಸೇನೆಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸೂಕಿ ವಿರುದ್ಧ ಇನ್ನೂ ಒಂದು ಪ್ರಕರಣ ವಿಚಾರಣೆಗೆ ಬಾಕಿ ಇದೆ.
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಸೂಕಿ ಅವರು ಈಗಾಗಲೇ ಅಪರಾಧಿ ಎಂದು ಘೋಷಿಸಲಾಗಿರುವ ಹಲವು ಪ್ರಕರಣಗಳಲ್ಲಿ26 ವರ್ಷಗಳ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾರೆ. ಆದರೆ, ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಅವರು ನಿರಾಕರಿಸುತ್ತಲೇ ಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.