ಬ್ಯಾಂಕಾಕ್ : ಮ್ಯಾನ್ಮಾರ್‌ಉಚ್ಛಾಟಿತ ನಾಯಕಿ ಆಂಗ್ ಸಾನ್ ಸೂ ಕಿ ಅವರು ತಮ್ಮ ಮೇಲೆ ದಾಖಲಾಗಿರುವ ಚುನಾವಣಾ ಅಕ್ರಮ ಆರೋಪವನ್ನು ಅಲ್ಲಗಳೆದಿದ್ದಾರೆ ಎಂದು ಕಾನೂನು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೈಪೆ ತಾವ್‌ನಲ್ಲಿ ಶುಕ್ರವಾರ ಮೊದಲ ಬಾರಿಗೆ ಪ್ರಕರಣದ ವಿಚಾರಣೆಗೆ ಹಾಜರಾದ ಸೂ ಕಿ ಅವರು ಆರೋಪವನ್ನು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಫೆಬ್ರುವರಿಯಲ್ಲಿ ಸೂ ಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಅಧಿಕಾರ ಕಿತ್ತುಕೊಂಡ ಸೇನೆ, 2020ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿತ್ತು.
ಚುನಾವಣೆ ಅಕ್ರಮ ಸೇರಿ ಹಲವು ಆರೋಪಗಳ ಸಂಬಂಧ ಸೂ ಕಿ ಅವರನ್ನುಈವರೆಗೆ ಗೋಪ್ಯ ಕಾರಾಗೃಹದಲ್ಲಿ ಇರಿಸಿದ್ದ ಸೇನೆ, ಕಳೆದ ತಿಂಗಳು ನೈಪೆ ತಾವ್‌ನಗರದ ಕಾರಾಗೃಹಕ್ಕೆ ಸ್ಥಳಾಂತರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.