ಪಿಟಿಐ
ಕೊಲಂಬೊ : ದ್ವೀಪ ರಾಷ್ಟ್ರದಲ್ಲಿ ವ್ಯಾಪಕವಾಗಿರುವ ಡ್ರಗ್ಸ್ ಸಾಗಣೆ ಮತ್ತು ಮಾರಾಟ ಜಾಲ ನಿಗ್ರಹಿಸುವುದಕ್ಕಾಗಿ ಒಂದು ವಾರ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 14,000 ಜನ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.
‘ಡಿ. 17ರಿಂದ 24ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು’ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬಂಧಿತರ ಪೈಕಿ 174 ಮಂದಿ ಕಾನೂನುಬಾಹಿರ ಸ್ವತ್ತುಗಳನ್ನು ಸ್ವಾಧೀನಕ್ಕೆ ಪಡೆದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದಾರೆ. ಜೊತೆಗೆ 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.