ಕಠ್ಮಂಡು: ನೇಪಾಳದಾದ್ಯಂತ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 224ಕ್ಕೆ ಏರಿದೆ. 28 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ನೈಸರ್ಗಿಕ ವಿಕೋಪಕ್ಕೆ ಸಿಲುಕಿ ಸಾವಿರಾರು ಜನ ಅತಂತ್ರರಾಗಿದ್ದಾರೆ. ಪೂರ್ವ ಮತ್ತು ಕೇಂದ್ರ ನೇಪಾಳದ ಹಲವು ಪ್ರದೇಶಗಳು ಇನ್ನೂ ಜಲಾವೃತವಾಗಿವೆ. ಈ ಮಧ್ಯೆ ಮಳೆ ಅಲ್ಪಮಟ್ಟಿಗೆ ತಗ್ಗಿದೆ.
ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸೇನೆ, ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ 20,000 ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.