ADVERTISEMENT

ನೇಪಾಳದಲ್ಲಿ ಭಾರಿ ಮಳೆ: ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿ 9 ಜನ ಸಾವು

ರಾಯಿಟರ್ಸ್‌
Published 29 ಜೂನ್ 2024, 12:57 IST
Last Updated 29 ಜೂನ್ 2024, 12:57 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ಕಠ್ಮಂಡು: ಪಶ್ಚಿಮ ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮೂವರು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗುಲ್ಮಿ ಜಿಲ್ಲೆಯ ಮಲಿಕಾ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬ ಐವರು ಮೃತಪಟ್ಟಿದ್ದಾರೆ. ಇವರೆಲ್ಲರೂ ಮಲಗಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಪ್ರಾಧಿಕಾರದ ವಕ್ತಾರ ಡಿಜಾನ್ ಭಟ್ಟಾರೈ ತಿಳಿಸಿದ್ದಾರೆ.

ADVERTISEMENT

ನೆರೆಯ ಸಯಾಂಗ್ಜಾ ಜಿಲ್ಲೆಯಲ್ಲಿ ಒಬ್ಬ ಮಹಿಳೆ ಮತ್ತು ಅವರ ಮೂರು ವರ್ಷದ ಮಗಳು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ. ಮತ್ತೊಂದು ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಭಟ್ಟಾರೈ ಹೇಳಿದ್ದಾರೆ.

ಈ ವರ್ಷದ ಮುಂಗಾರು ಮಳೆ ಪ್ರಾರಂಭವಾದಾಗಿನಿಂದಲೂ ಮಳೆ, ಭೂಕುಸಿತ ಸಂಬಂಧಿತ ಅವಘಡಗಳಲ್ಲಿ ಈವರೆಗೂ 35ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.