ಕಠ್ಮಂಡು: ಅನಾರೋಗದಿಂದ ಬಳಲುತ್ತಿರುವ ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರನ್ನು ಚಿಕಿತ್ಸೆಗಾಗಿ ಏರ್ ಲಿಫ್ಟ್ ಮೂಲಕ ಬುಧವಾರ ಭಾರತಕ್ಕೆ ಕರೆತರಲಾಗಿದೆ ಎಂದು ಅವರ ಕಚೇರಿ ತಿಳಿಸಿದೆ.
ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರಾಮಚಂದ್ರ ಪೌಡೆಲ್ (78) ಅವರು ಈ ಹಿಂದೆ ಮಾರ್ಚ್‌ನಲ್ಲಿ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ನಲ್ಲಿ ಚಿಕಿತ್ಸೆ ಪಡೆದಿದ್ದರು.
ಮಂಗಳವಾರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕಠ್ಮಂಡುವಿನ ತ್ರಿಭುವನ್ ವಿಶ್ವವಿದ್ಯಾಲಯದ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಭಾರತಕ್ಕೆ ಕಳುಹಿಸಲಾಗಿದೆ ಎಂದು ನೇಪಾಳ ಅಧ್ಯಕ್ಷ ಕಚೇರಿ ತಿಳಿಸಿದೆ.
ಕಳೆದ ವಾರ, ಅವರು ಉದರ ಸಮಸ್ಯೆಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಪೌಡೆಲ್ ಅವರು ಆಸ್ಪತ್ರೆಗೆ ದಾಖಲಾಗಿರುವುದು ಈ ತಿಂಗಳಲ್ಲಿ ಇದು ಎರಡನೇ ಬಾರಿ ಎಂದು ಕಚೇರಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.