ನ್ಯೂಯಾರ್ಕ್: 2021ರ ಕೊನೆಯ ದಿನದಂದು ನ್ಯೂಯಾರ್ಕ್ ಒಂದರಲ್ಲೇ 85 ಸಾವಿರಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಕೋವಿಡ್ ಆರಂಭವಾದ ದಿನದಿಂದ ಇದುವರೆಗಿನ ಅತಿಹೆಚ್ಚು ಪ್ರಕರಣ ಶನಿವಾರ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 85,476 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಒಟ್ಟು ಪರೀಕ್ಷೆಗೆ ಒಳಪಟ್ಟವರಲ್ಲಿ ಶೇಕಡಾ 22 ಮಂದಿಗೆ ಸೋಂಕು ತಗುಲಿದಂತಾಗಿದೆ. 88 ಮಂದಿ ಮೃತಪಟ್ಟಿದ್ದಾರೆ. ಅಮೆರಿಕ ರಾಷ್ಟ್ರದಾದ್ಯಂತ ಗುರುವಾರ 5,85,013 ಕೋವಿಡ್ ಪ್ರಕರಣಗಳು ವರದಿಯಾಗಿವೆ. 1,181 ಮಂದಿ ಮೃತಪಟ್ಟಿದ್ದಾರೆ.
ನ್ಯೂಯಾರ್ಕ್‌ನಲ್ಲಿ ಒಂದೇ ದಿನ ಸುಮಾರು 90 ಸಾವಿರ ಕೋವಿಡ್ ತಡೆ ಲಸಿಕೆಯ ಡೋಸ್‌ಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.