ನವದೆಹಲಿ:ಲೈಂಗಿಕ ದೌರ್ಜನ್ಯದ ವಿರುದ್ಧ ಹೋರಾಡುತ್ತಿರುವ ಕಾಂಗೊದ ಸ್ತ್ರೀರೋಗ ತಜ್ಞ ಡೆನಿಸ್ ಮುವ್ಚೆಜ್ ಹಾಗೂ ಮಾನವ ಹಕ್ಕು ಹೋರಾಟಗಾರ್ತಿ ಇರಾಕ್‌ನ ನಾಡಿಯಾ ಮುರಾದ್ ಅವರಿಗೆ 2018ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.
ಇರಾಕ್‌ನಲ್ಲಿ 2014ರಲ್ಲಿ ಐಎಸ್‌ಐಎಸ್‌ಸಂಘಟನೆಯಉಗ್ರರಿಗೆಸೆರೆ ಸಿಕ್ಕಿದ್ದ ಯಾಜಿದಿ ಮಹಿಳೆನಾಡಿಯಾ ಮುರಾದ್, ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು. ಕೆಲದಿನಗಳಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ ಅವರು ಮಾನವ ಹಕ್ಕುಗಳ ಹೋರಾಟ ಆರಂಭಿಸಿದ್ದರು.
ವಿಶ್ವದ ಹೆಸರಾಂತಸ್ತ್ರೀರೋಗ ತಜ್ಞ ಎನಿಸಿರುವಡೆನಿಸ್ ಮುವ್ಚೆಜ್, ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಚಿಕಿತ್ಸೆ ಹಾಗೂ ನೆರವು ನೀಡುತ್ತಿದ್ದಾರೆ. ಮಹಿಳೆಯರ ರಕ್ಷಣೆಗಾಗಿಯೂ ಶ್ರಮಿಸುತ್ತಿದ್ದಾರೆ.
ಕೊರಿಯಾ ದ್ವೀಪದಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಿದ್ದಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆಇನ್ ಅವರುಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ರೇಸ್‌ನಲ್ಲಿದ್ದರು.
20 ವರ್ಷಗಳ ಬಳಿಕ ಎರಿಟ್ರಿಯಾ ಹಾಗೂ ಇಥಿಯೋಪಿಯಾ ಮಧ್ಯೆ ಸಾಮರಸ್ಯಮೂಡಲು ಶ್ರಮಿಸಿದ್ದ ಇಥಿಯೋಪಿಯಾ ಪ್ರಧಾನಿ ಅಬಿಯ್ ಅಹ್ಮದ್ ಅವರ ಹೆಸರೂ ಕೇಳಿಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.