ADVERTISEMENT

ಜಪಾನ್‌ನ 'ನಿಹಾನ್ ಹಿಡಾಂಕ್ಯೊ' ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಏಜೆನ್ಸೀಸ್
Published 11 ಅಕ್ಟೋಬರ್ 2024, 13:10 IST
Last Updated 11 ಅಕ್ಟೋಬರ್ 2024, 13:10 IST
<div class="paragraphs"><p> 'ನಿಹಾನ್ ಹಿಡಾಂಕ್ಯೊ' ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ</p></div>

'ನಿಹಾನ್ ಹಿಡಾಂಕ್ಯೊ' ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

   

(ಚಿತ್ರ ಕೃಪೆ– X/@NobelPrize)

ಓಸ್ಲೋ: ಜಪಾನ್‌ನ 'ನಿಹಾನ್ ಹಿಡಾಂಕ್ಯೊ' ಸಂಸ್ಥೆಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ADVERTISEMENT

1956 ರಲ್ಲಿ ಸ್ಥಾಪನೆಯಾದ 'ನಿಹಾನ್ ಹಿಡಾಂಕ್ಯೊ' ಸಂಸ್ಥೆಯನ್ನು ಹಿಬಾಕುಶಾ (ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರನ್ನು ಪ್ರತಿನಿಧಿಸುವ ಜಪಾನೀಸ್ ಸಂಸ್ಥೆ) ಎಂದೂ ಕರೆಯಲಾಗುತ್ತದೆ.

ಪರಮಾಣು ಶಸ್ತ್ರಾಸ್ತ್ರ ಮುಕ್ತ ಜಗತ್ತನ್ನು ನಿರ್ಮಿಸಲು ದಣಿವರಿಯದ ಪ್ರಯತ್ನಗಳಿಗಾಗಿ ಈ ಬಹುಮಾನವನ್ನು ನೀಡಲಾಗಿದೆ ಎಂದು ನೊಬೆಲ್ ಸಮಿತಿಯ ಅಧ್ಯಕ್ಷ ಜಾರ್ಗೆನ್ ವಾಟ್ನೆ ಫ್ರೈಡ್ನೆಸ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಿಹಾನ್ ಹಿಡಾಂಕ್ಯೊ ಸಹ ಮುಖ್ಯಸ್ಥರು, ನೊಬೆಲ್ ಗೆಲ್ಲುತ್ತೇವೆ ಎಂದು ಕನಸು ಕಂಡಿರಲಿಲ್ಲ ಎಂದು ಹೇಳಿದ್ದಾರೆ.

ಜಪಾನಿನ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ಅಮೆರಿಕ ನಡೆಸಿದ ಪರಮಾಣು ದಾಳಿಯ ಸಂತ್ರಸ್ತರ ಬಗ್ಗೆ ಅನೇಕ ಸಾಕ್ಷ್ಯ ಚಿತ್ರಗಳನ್ನು ಈ ಸಂಸ್ಥೆ ನಿರ್ಮಿಸಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಯಾವ ದೇಶವು ಪರಮಾಣು ದಾಳಿ ನಡೆಸಬಾರದು ಎಂದೂ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.