ವಿಶ್ವಸಂಸ್ಥೆ: ಅಣ್ವಸ್ತ್ರ ಹೊಂದಿರುವ ಉತ್ತರ ಕೊರಿಯಾಗೆ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುವ ಹಕ್ಕು ಇದೆ. ಇದನ್ನು ಯಾರೂ ನಿರಾಕರಿಸುವಂತಿಲ್ಲ ಎಂದು ಉತ್ತರ ಕೊರಿಯಾದ ರಾಯಭಾರಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
'ಗುರುತಿಸಲಾಗದ ಕ್ಷಿಪಣಿ'ಯೊಂದರ ಪರೀಕ್ಷೆಯನ್ನು ಉತ್ತರ ಕೊರಿಯಾ ನಡೆಸಿದೆ ಎಂದು ದಕ್ಷಿಣ ಕೊರಿಯಾ ಹೇಳಿದ ಬೆನ್ನಲ್ಲೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, 'ನಮ್ಮನ್ನು ನಾವು ರಕ್ಷಿಸಿಕೊಳ್ಳಲು, ಶಾಂತಿ ನೆಲೆಗೊಳಿಸಲು ಹಾಗೂ ರಾಷ್ಟ್ರಕ್ಕೆ ಭದ್ರತೆಗೆ ಒದಗಿಸಲು ರಕ್ಷಣಾ ಪಡೆಯನ್ನು ಈಗಷ್ಟೇ ಕಟ್ಟುತ್ತಿದ್ದೇವೆ' ಎಂದು ನ್ಯೂಯಾರ್ಕ್‌ನಲ್ಲಿ ಕಿಮ್ ಸಾಂಗ್ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಪೂರ್ವ ಸಮುದ್ರದತ್ತ ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ ನಡೆಸಿದೆ. ಆದರೆ ಕ್ಷಿಪಣಿಯು ಯಾವ ಮಾದರಿಯದ್ದು, ಸಾಮರ್ಥ್ಯವೇನು ಎಂಬುದು ತಿಳಿದು ಬಂದಿಲ್ಲ ಎಂದು ದಕ್ಷಿಣ ಕೊರಿಯಾದ ಸೇನೆ ಮಂಗಳವಾರ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.