ಸಿನುಜು: ಉತ್ತರ ಕೊರಿಯಾದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸೃಷ್ಟಿಯಾದ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ 30 ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆದೇಶಿಸಿದ್ದಾರೆ.
ಭೀಕರ ಪ್ರವಾಹದಲ್ಲಿ ದೇಶದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದರು. ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದವು. ಉಕ್ಕಿ ಹರಿದ ಯಲು ನದಿ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ ತಮ್ಮದೇ ಪಕ್ಷದ ಕಾರ್ಯದರ್ಶಿಯನ್ನು ಕಿಮ್ ವಜಾಗೊಳಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಚೊಸನ್ ಟಿ.ವಿ. ವರದಿ ಮಾಡಿದೆ.
ಈ ಕುರಿತು ಮಾಹಿತಿ ನೀಡಿದ ಉತ್ತರ ಕೊರಿಯಾದ ರಾಜತಾಂತ್ರಿಕ ಲೀ ಇಲ್ ಗ್ಯೂ, ‘ಇತ್ತೀಚಿನ ಪ್ರವಾಹದಿಂದ ತೀವ್ರ ನಷ್ಟ ಉಂಟಾಗಿದ್ದರೂ, ಸಾಮಾಜಿಕ ಭದ್ರತಾ ದೃಷ್ಟಿಯಿಂದ ದೇಶದ ಆಡಳಿತ ಪರಿಸ್ಥಿತಿಯನ್ನು ನಿರಾಕರಿಸುತ್ತಿದೆ. ಆದರೆ ಅಧಿಕಾರಿಗಳು ಮಾತ್ರ ತಮ್ಮ ತಲೆ ಎಂದು ಉರುಳುವುದೋ ಎಂಬ ಭೀತಿಯಲ್ಲೇ ದಿನ ಕಳೆಯುವಂತಾಗಿದೆ’ ಎಂದಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಕಿಮ್ ಜಾಂಗ್ ಉನ್ ಅವರು ಭೇಟಿ ನೀಡಿ ಪರಿಶೀಲಿಸಿದ್ದರು. ಆಗಿರುವ ನಷ್ಟಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.