ಸೋಲ್: ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‌ನಲ್ಲಿ ಶನಿವಾರ ಸಂಜೆ ಹ್ಯಾಲೋವಿನ್ ಉತ್ಸವ ಆಚರಣೆಯ ವೇಳೆ ಕಾಲ್ತುಳಿತ ಉಂಟಾಗಿ 120 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಲ್‌ನಲ್ಲಿ ಪಾರ್ಟಿ ನಡೆಯುವ ಪ್ರಮುಖ ಸ್ಥಳವಾದ ಹ್ಯಾಮಿಲ್ಟನ್ ಹೋಟೆಲ್‌ನ ಸಮೀಪ ನೆರೆದಿದ್ದ ಭಾರಿ ಸಂಖ್ಯೆಯ ಜನರು ಪಕ್ಕದ ಕಿರಿದಾದ ರಸ್ತೆಯಲ್ಲಿ ಸಾಗುತ್ತಿದ್ದಾಗ ಅಲ್ಲಿ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತ ಉಂಟಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
‘ನೂಕುನುಗ್ಗಲಿನಲ್ಲಿ ಹಲವರಿಗೆ ಹೃದಯಸ್ತಂಭನವಾಗಿದೆ. ಕೆಲವರು ಕಾಲ್ತುಳಿತದಿಂದ ಕೊನೆಯುಸಿರೆಳೆದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.