ಜಿನೀವಾ: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್, ಡೆಲ್ಟಾ ರೂಪಾಂತರಕ್ಕಿಂತಲೂಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಆದರೆಸೋಂಕಿನ ಲಕ್ಷಣಗಳು ಕಡಿಮೆ ಇದ್ದರೂ ಈ ತಳಿಯು ಲಸಿಕೆಗಳ ಪರಿಣಾಮವನ್ನು ಕುಗ್ಗಿಸುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾಹಿತಿ ನೀಡಿದೆ.
ವರ್ಷಾರಂಭದಲ್ಲಿ ಕೊರೊನಾ ವೈರಸ್ ಡೆಲ್ಟಾ ರೂಪಾಂತರ ತಳಿಯ ಮೊದಲ ಪ್ರಕರಣ ಭಾರತದಲ್ಲಿ ಪತ್ತೆ ಹಚ್ಚಲಾಗಿತ್ತು.
ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ (ನ. 24) ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ ಓಮೈಕ್ರಾನ್ ಎಂದು ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಕಳವಳ ಮೂಡಿಸಿದ್ದು, ಹಲವಾರು ರಾಷ್ಟ್ರಗಳು ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿವೆ.
ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿಯ ಪ್ರಕಾರ ಡಿಸೆಂಬರ್ 9ರ ವೇಳೆಗೆ 63 ರಾಷ್ಟ್ರಗಳಲ್ಲಿ ಓಮೈಕ್ರಾನ್ ಪ್ರಕರಣ ಕಾಣಿಸಿಕೊಂಡಿದೆ. ಡೆಲ್ಟಾಗೆ ಹೋಲಿಸಿದರೆ ದಕ್ಷಿಣ ಆಫ್ರಿಕಾದಲ್ಲಿ ಓಮೈಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದೆ.
ಪ್ರಾಥಮಿಕ ದತ್ತಾಂಶಗಳ ಪ್ರಕಾರ ಓಮೈಕ್ರಾನ್ ರೂಪಾಂತರ ತಳಿ ಕಡಿಮೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅಲ್ಲದೆ ಡೆಲ್ಟಾ ರೂಪಾಂತರ ತಳಿಗಿಂತಲೂ ಹೆಚ್ಚು ಹರಡುವ ಸಾಧ್ಯತೆಯಿದೆ ಎಂದು ಹೇಳಿದೆ.
ಓಮೈಕ್ರಾನ್ ಸೋಂಕು ಕಡಿಮೆ ರೋಗ ಲಕ್ಷಣಗಳನ್ನು ಹೊಂದಿದೆ. ಆದರೆ ಅದರ ತೀವ್ರತೆಯನ್ನು ದೃಢೀಕರಿಸಲು ಬೇಕಾದಷ್ಟು ಡೇಟಾ ಲಭ್ಯವಾಗಿಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.