ADVERTISEMENT

ಗಾಜಾದ ಶಾಲೆಯೊಂದರ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಜನರು ಸಾವು

ರಾಯಿಟರ್ಸ್
Published 10 ಆಗಸ್ಟ್ 2024, 5:59 IST
Last Updated 10 ಆಗಸ್ಟ್ 2024, 5:59 IST
<div class="paragraphs"><p>ಇಸ್ರೇಲ್ ದಾಳಿ</p></div>

ಇಸ್ರೇಲ್ ದಾಳಿ

   

ಗಾಜಾ: ನಿರಾಶ್ರಿತರಿಗೆ ಆಶ್ರಯ ನೀಡಿದ್ದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ.

‘ಅಲ್-ತಬಾಯೀನ್ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿರುವ ವೇಳೆ ವೈಮಾನಿಕ ದಾಳಿ ನಡೆದಿದೆ. ಇದು ಸಾವು ನೋವುಗಳ ಹೆಚ್ಚಳಕ್ಕೆ ಕಾರಣವಾಗಿದೆ’ ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಇಸ್ರೇಲ್ ವಾಯುಪಡೆ(ಐಎಎಫ್‌), ಹಮಾಸ್‌ ಕಮಾಂಡ್‌ ಸೆಂಟರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನೆಡಸಲಾಗಿತ್ತು ಎಂದಿದೆ.

‘ಅಲ್-ತಬಾಯೀನ್ ಶಾಲೆಯಲ್ಲಿ ಅಡಗಿಕೊಂಡಿರುವ ಹಮಾಸ್ ಕಮಾಂಡ್‌ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ’ ಎಂದು ಐಎಎಫ್‌ ತಿಳಿಸಿದೆ.

‘ದಾಳಿಗೂ ಮುನ್ನ ನಾಗರಿಕರಿಗೆ ಅಪಾಯವಾಗುದನ್ನು ತಪ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು’ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.