ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) ಪುರಾತನ ಹಿಂದೂ ದೇಗುಲ ಶಾರದಾಪೀಠಕ್ಕೆ ಸಂಪರ್ಕ ಕಲ್ಪಿಸುವ ಕಾರಿಡಾರ್ ನಿರ್ಮಿಸಲು ಪಾಕಿಸ್ತಾನ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಇದರಿಂದಾಗಿಭಾರತದ ಹಿಂದೂ ಪ್ರವಾಸಿಗಳು ಶಾರದಾಪೀಠಕ್ಕೆ ಭೇಟಿ ನೀಡಲು ಅನುಕೂಲವಾಗಲಿದೆ.
ಶಾರದಾಪೀಠಕ್ಕೆ ಕಾರಿಡಾರ್ ನಿರ್ಮಿಸಲು ಭಾರತ ಈಗಾಗಲೇ ಪಾಕಿಸ್ತಾನಕ್ಕೆ ಪ್ರಸ್ತಾವನೆ ಕಳುಹಿಸಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
‘ಕರ್ತಾರ್‌ಪುರ ಕಾರಿಡಾರ್ ಬಳಿಕ ಹಿಂದೂಗಳಿಗೆ ಮತ್ತೊಂದು ದೊಡ್ಡ ಸುದ್ದಿ ಕಾದಿದೆ. ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಬಳಿಕ ಪ್ರಧಾನಿಗೆ ವರದಿ ಸಲ್ಲಿಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ಶಾರದಾಪೀಠಕ್ಕೆ ಕಾರಿಡಾರ್ ನಿರ್ಮಿಸುವಂತೆ ಭಾರತಈ ಹಿಂದೆಯೂ ಹಲವು ಬಾರಿ ಮನವಿ ಮಾಡಿತ್ತು. ಜನರ ಧಾರ್ಮಿಕ ಆಶೋತ್ತರಗಳನ್ನು ಗಮನದಲ್ಲಿರಿಸಿ ಪ್ರಸ್ತಾವನೆ ಸಲ್ಲಿಸಲಾಗಿತ್ತು’ ಎಂದು ನವದೆಹಲಿಯ ಅಧಿಕೃತ ಮೂಲಗಳು ಪ್ರಸ್ತುತ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿವೆ.
ಸುಮಾರು 5 ಸಾವಿರ ವರ್ಷಗಳಷ್ಟು ಪುರಾತನವಾದ ಈ ಶಾರದಾಪೀಠ 6ರಿಂದ 12ನೇ ಶತಮಾನದ ಅವಧಿಯಲ್ಲಿ ಭಾರತ ಖಂಡದ ಪ್ರಮುಖ ದೇಗುಲ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.