ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಅವರ ಸೇವಾವಧಿಯನ್ನು, ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದುಸೋಮವಾರ ಮಾಧ್ಯಮವೊಂದು ವರದಿ ಮಾಡಿದೆ.
‘ಜನರಲ್ ಖಮರ್ ಜಾವೇದ್ ಬಾಜ್ವಾ ಅವರ ಪ್ರಸ್ತುತ ಸೇವಾ ಅವಧಿಯ ಮುಗಿದ ದಿನಾಂಕದಿಂದ, ಮುಂದಿನ ಮೂರು ವರ್ಷದವರೆಗೆ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದೆ’ ಎಂದು ಪ್ರಧಾನ ಮಂತ್ರಿ ಕಚೇರಿ ಅಧಿಸೂಚನೆಯಲ್ಲಿ ತಿಳಿಸಿದೆ.
‘ಪ್ರಾದೇಶಿಕ ಭದ್ರತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಮಾಜಿ ಪ್ರಧಾನಿ ನವಾಜ್ ಶರೀಫ್ ಅವರುಜನರಲ್ ಖಮರ್ ಜಾವೇದ್ ಬಾಜ್ವಾ ಅವರನ್ನು 2016ರಲ್ಲಿ ನೇಮಕ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.