ADVERTISEMENT

ಪಾಕ್ ಸೇನಾ ಮುಖ್ಯಸ್ಥ ಖಮರ್‌ ಜಾವೇದ್‌ ಬಜ್ವಾ ಅವಧಿ ಮೂರು ವರ್ಷ ವಿಸ್ತರಣೆ

ಏಜೆನ್ಸೀಸ್
Published 19 ಆಗಸ್ಟ್ 2019, 12:48 IST
Last Updated 19 ಆಗಸ್ಟ್ 2019, 12:48 IST
ಜನರಲ್ ಖಮರ್‌ ಜಾವೇದ್‌ ಬಜ್ವಾ
ಜನರಲ್ ಖಮರ್‌ ಜಾವೇದ್‌ ಬಜ್ವಾ   

ಇಸ್ಲಾಮಾಬಾದ್:ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್‌ ಜಾವೇದ್‌ ಬಜ್ವಾ ಅಧಿಕಾರಾವಧಿಯನ್ನು ಮೂರು ವರ್ಷ ವಿಸ್ತರಿಸಿ ಅಲ್ಲಿನ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಬಜ್ವಾ ಅವರ ಅಧಿಕಾರ ನವೆಂಬರ್‌ನಲ್ಲಿ ಕೊನೆಗೊಳ್ಳುವುದರಲ್ಲಿತ್ತು.

‘ಜನರಲ್ ಖಮರ್‌ ಜಾವೇದ್‌ ಬಜ್ವಾ ಅವರನ್ನು ಇನ್ನೊಂದು ಅವಧಿಗೆ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಈಗಿನ ಅವಧಿ ಮುಕ್ತಾಯಗೊಂಡ ನಂತರವೂ ಮೂರು ವರ್ಷಗಳ ಅವಧಿಗೆ ಅವರೇ ಸೇನಾ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ. ಪ್ರಾದೇಶಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆದೇಶದಲ್ಲಿ ತಿಳಿಸಿದ್ದಾರೆ.

ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಸರ್ಕಾರ ರದ್ದುಗೊಳಿಸಿದ ಬಳಿಕ ಉಭಯ ರಾಷ್ಟ್ರಗಳ ನಡುವಣ ವಾಕ್‌ಸಮರ ಮುಂದುವರಿದಿದೆ. ಇದರ ಬೆನ್ನಲ್ಲೇ ಪಾಕಿಸ್ತಾನವು ಸೇನಾ ಮುಖ್ಯಸ್ಥರ ಅವಧಿ ವಿಸ್ತರಣೆ ನಿರ್ಧಾರ ಪ್ರಕಟಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.