ADVERTISEMENT

ವಿಶ್ವಸಂಸ್ಥೆಯಲ್ಲಿ ಜಮ್ಮು–ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕ್

ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಶೆಹಬಾಜ್‌ ಆಗ್ರಹ

ಪಿಟಿಐ
Published 27 ಸೆಪ್ಟೆಂಬರ್ 2024, 15:51 IST
Last Updated 27 ಸೆಪ್ಟೆಂಬರ್ 2024, 15:51 IST
ಶೆಹಬಾಜ್‌ ಷರೀಫ್‌
ಶೆಹಬಾಜ್‌ ಷರೀಫ್‌   

ವಿಶ್ವಸಂಸ್ಥೆ: ಜಮ್ಮು–ಕಾಶ್ಮೀರದ ಬಗ್ಗೆ ಶುಕ್ರವಾರ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿದ ಪಾಕಿಸ್ತಾನ, ‘370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಮತ್ತೆ ನೀಡಬೇಕು ಮತ್ತು ಈ ವಿಚಾರವನ್ನು ಮಾತುಕತೆಯೊಂದಿಗೆ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು, ‘ಪ್ಯಾಲೆಸ್ಟೀನ್‌ನ ನಾಗರಿಕರಂತೆ ಜಮ್ಮು ಮತ್ತು ಕಾಶ್ಮೀರದ ಜನರು ಹಲವಾರು ವರ್ಷಗಳಿಂದ ತಮ್ಮ ಸ್ವಾತಂತ್ರ್ಯ ಮತ್ತು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ’ ಎಂದು ಹೇಳಿದರು.

‘ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಏಕಪಕ್ಷೀಯ ಮತ್ತು ಕಾನೂನುಬಾಹಿರ ನಿರ್ಧಾರವನ್ನು ಭಾರತ ಹಿಂಪಡೆದುಕೊಳ್ಳಬೇಕು’ ಎಂದು ಆಗ್ರಹಿಸಿದರು. 

ADVERTISEMENT

ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಪಾಕಿಸ್ತಾನವು ಪದೇ ಪದೇ ವಿಶ್ವಸಂಸ್ಥೆಯ ವಿವಿಧ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿದೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್ ಭಾರತದ ಭಾಗವಾಗಿದ್ದು, ಈ ಬಗ್ಗೆ ಪಾಕಿಸ್ತಾನ ಯೋಚಿಸುವ ಅಗತ್ಯವಿಲ್ಲ ಎಂದು ಭಾರತ ಹಲವು ಬಾರಿ ತಿರುಗೇಟು ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.