ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಝ್ ಷರೀಫ್ ಅವರ ಸಚಿವ ಸಂಪುಟದ 34 ಸದಸ್ಯರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ಅಧ್ಯಕ್ಷ ಆರಿಫ್ ಅಲ್ವಿ ಅವರು ಗೈರಾದ ಕಾರಣ ಸೆನೆಟ್‌ನ ಅಧ್ಯಕ್ಷ ಸಾದಿಕ್ ಸಂಜರಾನಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಿಗದಿಯಾಗಿತ್ತು. ಆದರೆ ಅಧ್ಯಕ್ಷಅಧ್ಯಕ್ಷ ಆರಿಫ್ ಅಲ್ವಿ ಅವರು ಪ್ರಮಾಣ ವಚನ ಬೋಧಿಸಲು ನಿರಾಕರಿಸಿದ್ದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ ಝರ್ದಾರಿ ಅವರು ವಿದೇಶಾಂಗ ಸಚಿವರಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.