ಇಸ್ಲಾಮಾಬಾದ್: ‘ಗಲ್ಲುಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಶರಣಾದ ಬಳಿಕವಷ್ಟೆ, ಅವರು ತಮ್ಮ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಪರಿಗಣಿಸಲಾಗುವುದು’ ಎಂದು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಹೇಳಿದೆ.
ಈ ಕುರಿತು ಶನಿವಾರ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
‘ಕಾನೂನಿಗೆ ಶರಣಾಗದೆ ಅವರು ಶಿಕ್ಷೆ ವಿರೋಧಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ’ ಎಂದು ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.
ಗಲ್ಲುಶಿಕ್ಷೆ ಪ್ರಶ್ನಿಸಿ ಮುಷರಫ್ ಗುರುವಾರ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.